ಮುಂದಿನ ಐದು ದಿನ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2024-07-03 15:57 GMT

ಉಡುಪಿ: ಭಾರತೀಯ ಹವಾಮಾನ ಇಲಾಖೆ/ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಲವು ಸೂಚನೆಗಳನ್ನು ನೀಡಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆ ಮಾಡಬೇಕು.

ಸಾರ್ವಜನಿಕರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸ ಬೇಕು. ಮಕ್ಕಳು ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬದ ಹತ್ತಿರ ಇರಬಾರದು. ತುಂಡಾದ ವಿದ್ಯುತ್ ತಂತಿ ಗಳಿಂದ ದೂರವಿರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಕೆಳಗೆ ನಿಲ್ಲಬಾರದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ, ದುರ್ಬಲ ಕಟ್ಟಡದಲ್ಲಿ ವಾಸಿಸುವವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಅಥವಾ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಳ್ಳಬೇಕು ಎಂದು ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News