ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆಯಲ್ಲಿ ಅವಕಾಶ

Update: 2024-07-06 14:24 GMT

ಉಡುಪಿ, ಜು.6: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್‌ಜೆಂಡರ್ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪ ಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ.

ಆದ್ದರಿಂದ ಜುಲೈ 8ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾ ಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ಸ್‌ ಗುರುತಿನ ಚೀಟಿ, ಪಾಸ್‌ಪೋರ್ಟ್ ಸೈಜ್ ಫೋಟೋ ಮತ್ತು ಆಧಾರ ಕಾರ್ಡ್‌ನ್ನು ಕಡ್ಡಾಯವಾಗಿ ನೀಡುವುದು ಅವಶ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News