ಉಡುಪಿ: ಮಿನಿ ಉದ್ಯೋಗ ಮೇಳ

Update: 2024-07-06 14:27 GMT

ಉಡುಪಿ, ಜು.6: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 9ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News