ಮಾಧ್ಯಮ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ: ಶ್ರೀರಾಜ್ ಗುಡಿ

Update: 2024-07-10 14:01 GMT

ಕೋಟ, ಜು.10: ಮಾಧ್ಯಮ ಕ್ಷೇತ್ರ ಎನ್ನುವುದು ಕೇವಲ ದೂರದರ್ಶನ, ಪತ್ರಿಕೆಗಳಿಗೆ ಸೀಮಿತವಾಗಿಲ್ಲ. ಇದನ್ನು ಹೊರತು ಪಡಿಸಿ ಸಿನಿಮಾ, ಜಾಹೀ ರಾತು, ಅನಿಮೇಷನ್ ಮೊದಲಾದ ವಿಭಾಗದಲ್ಲಿ ಹತ್ತಾರು ಕೋರ್ಸ್‌ಗಳಿವೆ. ಸಾವಿರಾರು ಉದ್ಯೋಗವಕಾಶಗಳಿವೆ ಎಂದು ಮಣಿಪಾಲ ಎಂಐಸಿ ವಿಭಾಗದ ಉಪನ್ಯಾಸಕ ಶ್ರೀರಾಜ್ ಗುಡಿ ತಿಳಿಸಿದ್ದಾರೆ.

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಬುಧವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ವಿದ್ಯಾರ್ಥಿಗಳು ಮಾಧ್ಯಮ ಕ್ಷೇತ್ರದ ಅವಕಾಶಗಳ ಬಗ್ಗೆ ಆಸಕ್ತಿ ಬೆಳೆಸಿ ಕೊಳ್ಳಬೇಕು. ಮಾಧ್ಯಮವನ್ನು ಕೇವಲ ಕಾಮಾಲೆ ಕಣ್ಣಿನಿಂದ ನೋಡಿ ಬಯುವ ಮನಃಸ್ಥಿತಿ ದೂರ ಮಾಡಿಕೊಂಡು. ಇಲ್ಲಿರುವ ಉತ್ತಮ ಅವಕಾಶಗಳನ್ನು ಸ್ವೀಕರಿಸಬೇಕು ಎಂದರು.

ಈ ಸಂದರ್ಭ ಹಿರಿಯ ಪತ್ರಕರ್ತ ಕೋಟ ರಂಗಪ್ಪಯ್ಯ ಹೊಳ್ಳ ಅವರಿಗೆ ಗೌರವ ಪುರಸ್ಕಾರ ನೀಡಲಾಯಿತು. ಕೋಟ ವಿವೇಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಜಗದೀಶ ನಾವಡ, ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘದ ಆಡಳಿತ ಮಂಡಳಿ ಸದಸ್ಯ ಚಿತ್ತೂರು ಪ್ರಭಾಕರ ಆಚಾರ್ಯ, ಪತ್ರಕರ್ತರಾದ ರವೀಂದ್ರ ಕೋಟ, ಕೆ.ಜಿ.ವೈದ್ಯ, ಇಬ್ರಾಹಿಂ ಸಾಹೇಬ್, ಪ್ರವೀಣ್ ಮುದ್ದೂರು, ಆದಿತ್ಯ ಮೊದಲಾದವರಿದ್ದರು.

ಸಂಘದ ಸದಸ್ಯರಾದ ಮೋಹನ ಉಡುಪ ಸ್ವಾಗತಿಸಿ, ವಸಂತ್ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಹರೀಶ್ ಕಿರಣ್ ತುಂಗ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News