ಯಕ್ಷಗಾನ ಆರಾಧನಾ ಕಲೆ: ಸುಬ್ರಹ್ಮಣ್ಯ ಪ್ರಸಾದ್

Update: 2024-07-26 14:02 GMT

ಹೆಬ್ರಿ : ಭಾರತೀಯ ರಂಗಕಲೆಗಳಲ್ಲಿ ಯಕ್ಷಗಾನ ಸಮಷ್ಟಿಕಲೆ ಇದೊಂದು ಆರಾಧನಾ ಕಲೆ. ಭಾಷೆಯಲ್ಲಿ ಹಿಡಿತವಿರುವ ಯಕ್ಷಗಾನ ಕಲೆ ಉಳಿಸಿ ಬೆಳಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ ಹೇಳಿದ್ದಾರೆ.

ಹೆಬ್ರಿ ಎಸ್.ಆರ್. ಬಳಿ ಇರುವ ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆರಂಭಗೊಂಡ ಯಕ್ಷಗಾನ ಭಾಗವತಿಗೆ ತರಗತಿ ಯನ್ನು ಭಾಗವತಿಗೆಯ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸಮಾರಂಭವನ್ನು ದಿನೇಶ್ ಶೆಟ್ಟಿ ಹುತ್ತುರ್ಕೆ ಉದ್ಘಾಟಿಸಿ ಶುಭ ಹಾರೈಸಿ ದರು. ಇದೇ ಸಮಯದಲ್ಲಿ ಇತ್ತೀಚಿಗೆ ನಿಧನರಾದ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರಿಗೆ ಸಂತಾಪ ಸೂಚಿಸಲಾಯಿತು.

ಮಾಳೂರು ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಗೋಪಾಲಕೃಷ್ಣ ಶೆಟ್ಟಿ, ಪ್ರವೀಣ್ ಸೂಡ, ಚಾಣಕ್ಯ ಸಂಸ್ಥೆಯ ಗೌರವ ಸಲಹೆಗಾರ ನಿತ್ಯಾನಂದ ಭಟ್, ಸವಿತಾ ಕೆ., ಸುಮಿತ್ರಾ ಮೊದಲಾದವರು ಉಪಸ್ಥಿತರಿ ದ್ದರು. ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News