ಯುವಕ ನಾಪತ್ತೆ

Update: 2024-09-17 14:15 GMT

ಉಡುಪಿ, ಸೆ.17: ಇತ್ವಾರಿ ಮರಕಮ್ (30) ಎಂಬ ಯುವಕ ಸೆ. 9ರಂದು ಕೂಲಿ ಕೆಲಸದ ನಿಮಿತ್ತ ಬೆಂಗಳೂರಿನಿಂದ ಉಡುಪಿಗೆ ಬರುವ ರೈಲು ಹತ್ತಿದ್ದು, ಸೆ.10ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ರೈಲ್ವೆ ನಿಲ್ದಾಣದಲ್ಲಿ ಇಳಿದು ಹೋದವರು ವಾಪಸುಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News