ಪವರ್ ಲಿಫ್ಟಿಂಗ್ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

Update: 2024-09-20 12:23 GMT

ಕುಂದಾಪುರ, ಸೆ.20: ರಾ ಫಿಟ್ನೆಸ್ ಸಂಸ್ಥೆ ಸಾಲಿಗ್ರಾಮ ವತಿಯಿಂದ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ (ಪವರ್ ಲಿಫ್ಟಿಂಗ್) ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ ಹರ್ಷ ಹೆಗ್ಡೆ ಸಬ್ ಜೂನಿಯರ್ 74 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

ಇವರು ಅ. 14 ರಿಂದ 18ನೇ ವರೆಗೆ ಮಡಗಾವ್ ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನ ಸಬ್ ಜೂನಿಯರ್ ವಿಭಾಗದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News