ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಗೆ ಅರ್ಜಿ ಆಹ್ವಾನ

Update: 2024-09-20 13:26 GMT

ಉಡುಪಿ, ಸೆ.20: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್ 2ರವರೆಗೆ ಮಾತ್ರ) ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಎಲ್‌ಇ-5ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆ ಪಡೆಯಲು ಮುಂಚಿತವಾಗಿ ಎಇ-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರ ವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾ ನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಸ್ಫೋಟಕ ಕಾಯಿದೆ ಮತ್ತು ನಿಯಮ 2008ರ ಶೆಡ್ಯೂಲ್-4ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಮಿತಿ ಈಗಾಗಲೇ ನಿಗದಿಪ ಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಸೆ.20ರಿಂದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು.

ಅರ್ಜಿ ಪಡೆಯಲು ಅಕ್ಟೋಬರ್ 15 ಕೊನೆಯ ದಿನವಾಗಿದ್ದು, ನಿಗದಿತ ದಿನಾಂಕದ ಬಳಿಕ ಯಾವುದೇ ಕಾರಣಕ್ಕೂ ಅರ್ಜಿ ಗಳನ್ನು ನೀಡಲಾಗುವುದಿಲ್ಲ. ಅರ್ಜಿ ಸ್ವೀಕರಿಸಿದ ನಂತರ ಅರ್ಜಿದಾರರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಈಗಾಗಲೇ ರಚಿಸಲಾಗಿರುವ ತಾಲೂಕು ಮಟ್ಟದ ಸಮಿತಿಯಿಂದ (ಅಗ್ನಿಶಾಮಕ ಇಲಾಖೆ, ತಹಶೀಲ್ದಾರರು, ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ) ನೇರವಾಗಿ ಎನ್‌ಓಸಿ(ನಿರಾಕ್ಷೇಪಣಾ ಪತ್ರ)ಯನ್ನು ಪಡೆಯಬೇಕು.

ಈ ರೀತಿ ಪಡೆದ ನಿರಾಕ್ಷೇಪಣಾ ಪತ್ರಗಳನ್ನು ಎಇ-5 ನಮೂನೆ, ಪ್ರಸ್ತಾವಿತ ಜಮೀನಿನ ನಕ್ಷೆ ಹಾಗೂ ಇತ್ತೀಚಿನ ಪಹಣಿ ಪತ್ರ ದಾಖಲೆಗಳು ಹಾಗೂ ತಾಲೂಕು ಮಟ್ಟದ ಸಮಿತಿಯಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದೊಂದಿಗೆ ಅರ್ಜಿ ಸಲ್ಲಿಸಿ ದಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಪರವಾನಿಗೆ ನೀಡಲು ಕ್ರಮಕೈಗೊಳ್ಳಲಾಗುವುದು.

ತಾಲೂಕು ಮಟ್ಟದ ಸಮಿತಿ ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಬ ಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News