ಫುಟ್ಬಾಲ್ ಪಂದ್ಯಾಟ: ಕೋಡಿ ಕಾಲೇಜು ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Update: 2024-09-21 15:46 GMT

ಕುಂದಾಪುರ, ಸೆ.21: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ.20ರಂದು ನಡೆದ ಕುಂದಾಪುರ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕೋಡಿ ಹಾಜಿ ಕೆ ಮೋಹಿದ್ದಿನ್ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದ ಆಟಗಾರ ಅಬ್ದುಲ್ ಹಕಂ ’ಬೆಸ್ಟ್ ಡಿಫೆಂಡರ್’ ಪ್ರಶಸ್ತಿ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಚಾಲಕರು, ಅಧ್ಯಕ್ಷರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News