ಉಡುಪಿ: ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

Update: 2024-09-21 16:13 GMT

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರು ವಿವಿ ಯುವ ರೆಡ್ ಕ್ರಾಸ್ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ವಿಶ್ವ ಶಾಂತಿ ದಿನದ ಅಂಗವಾಗಿ ವಿಶ್ವ ಶಾಂತಿ ಗಾಗಿ ಮಾನವೀಯತೆಯ ನಡಿಗೆ ಜಾಥಾವು ಇಂದು ಸಂತೆಕಟ್ಟೆ ಬಸ್‌ನಿಲ್ದಾಣದಿಂದ ಅಂಬಾಗಿಲು ಮೂಲಕ ಅಮೃತ್ ಗಾರ್ಡನ್‌ನಲ್ಲಿ ಸಮಾಪನಗೊಂಡಿತು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ವಿ.ಜಿ.ಶೆಟ್ಟಿ ಅವರು ಜಾಥಾಕ್ಕೆ ಚಾಲನೆ ನೀಡಿದರು.

ಜಾಥಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ರೆಡ್‌ಕ್ರಾಸ್ ಗೌರವ ಖಚಾಂಚಿ ರಮಾದೇವಿ, ರೆಡ್‌ಕ್ರಾಸ್ ಪದಾಧಿಕಾರಿಗಳಾದ ಟಿ.ಚಂದ್ರಶೇಖರ್, ಬಾಲಕೃಷ್ಣ ಶೆಟ್ಟಿ ಕೆ, ಲಯನ್ ವಲಯಾಧ್ಯಕ್ಷ ಅನಂತ ಶೆಟ್ಟಿ, ಖಚಾಂಚಿ ರೇಖಾ ಶೆಟ್ಟಿ, ರೆಡ್‌ಕ್ರಾಸ್ ಸದಸ್ಯ ರಾಘವೇಂದ್ರ ಪ್ರಭು ಕರ್ವಾಲ್, ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪ ಕರು, ರೆಡ್‌ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಭಾಗವಹಿಸಿದ್ದರು.


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News