ಮದುವೆ, ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಅವಶ್ಯಕತೆ ಇಲ್ಲ: ಮಮತಾ ದೇವಿ

Update: 2024-09-22 14:47 GMT

ಉಡುಪಿ, ಸೆ.22: ವಿಧಾನ ಪರಿಷತ್ ದೈವಾರ್ಷಿಕ ಚುನಾವಣಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಾರ್ವಜನಿಕರು ಮದುವೆ ಮತ್ತು ಇನ್ನಿತರ ಖಾಸಗಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಯನ್ನು ಪಡೆಯುವ ಅವಶ್ಯಕತೆ ಇರುವುದಿಲ್ಲ. ಆದರೆ ಈ ಸಭೆ, ಸಮಾರಂಭಗಳಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ತಿಳಿಸಿದ್ದಾರೆ

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈ ಚುನಾವಣೆಯ ಮಾದರಿ ನೀತಿ ಸಂಹಿತೆಯು ಅ.28ರವರೆಗೆ ಜಾರಿಯಲ್ಲಿರುತ್ತದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಚುನಾವಣಾ ಸಭೆ, ಸಮಾರಂಭಗಳು ನಡೆಸುವ ಬಗ್ಗೆ ಮತ್ತು ಚುನಾವಣಾ ವಾಹನ ಪ್ರಚಾರದ ಬಗ್ಗೆ ಜಿಲ್ಲೆಯೊಳಗೆ ಸಂಚರಿ ಸಲು ಅನುಮತಿ ಯನ್ನು ಕೋರಿ ಬರುವಂತಹ ಅರ್ಜಿಗಳನ್ನು ಸಹಾಯಕ ಚುನಾವಣಾಧಿ ಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿಗಳು ಉಡುಪಿರವರ ಜಿಲ್ಲಾಧಿಕಾರಿಗಳ ಕಛೇರಿಯ ಏಕಗವಾಕ್ಷಿ ಕೇಂದ್ರದಲ್ಲಿ ಪಡೆದುಕೊಳ್ಳ ಬಹುದಾಗಿದೆ.

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರ ವ್ಯಾಪ್ತಿ ಸಂಬಂದಿಸಿ ದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎರಡು ಕಡೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲು ಸ್ಪರ್ಧಿಸುವ ಅಭ್ಯರ್ಥಿ ಮತ್ತು ಅಭ್ಯರ್ಥಿ ಪರ ಎಜೆಂಟರಿಗೆ ಮಾತ್ರ ಸಂಚಾ ರಿಸಲು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದ ಚುನಾವಣಾಧಿಕಾರಿಯವರ ಈ ಕಛೇರಿಯ 1ನೇ ಮಹಡಿಯಲ್ಲಿ ತೆರಯಲಾದ ಏಕಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಮಾಹಿತಿಯನ್ನು ನೀಡಿ ಹಾಗೂ ಅರ್ಜಿಯನ್ನು ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳಬಹುದು.

ರಾಜಕೀಯ ರಹಿತವಾದ ಇತರೇ ಸಾರ್ವಜನಿಕ, ಸಭೆ ಸಮಾರಂಭಗಳನ್ನು ನಡೆಸುವ ಅಯೋಜಕರು ಜಿಲ್ಲೆಯ ಎಲ್ಲಾ ತಾಲೂಕು ಕಛೇರಿಯ ಏಕಗವಾಕ್ಷಿ ಕೇಂದ್ರದಲ್ಲಿ ಮುಂಚಿತವಾಗಿ ಮಾಹಿತಿಯನ್ನು ನೀಡಿ, ಅರ್ಜಿ ಸಲ್ಲಿಸಿ, ತಾಲೂಕು ತಹಶೀಲ್ದಾರರಿಂದ ಅನುಮತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News