ತಿರುಪತಿ ಪ್ರಸಾದ ವಿವಾದ| ಪ್ರಧಾನಿ ಸೂಕ್ತ ತನಿಖೆ ನಡೆಸಲಿ: ರಮೇಶ್ ಕಾಂಚನ್

Update: 2024-09-23 11:59 GMT

ಉಡುಪಿ: ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ತನಿಖೆ ನಡೆಸಿ ದೇಶದ ಜನತೆಗೆ ಸತ್ಯ ತಿಳಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

ದೇಶದಲ್ಲಿ ದೊಡ್ಡ ಮಟ್ಟದ ಕೋಲಾಹಲಕ್ಕೆ ಹಾಗೂ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವಂತ ವಿಚಾರ ಚರ್ಚೆಯಾ ಗುತ್ತಿದ್ದು ಕಳೆದ ಎರಡು ಅವಧಿಯಲ್ಲಿ ಎನ್‌ಡಿಎ ಮಿತ್ರಪಕ್ಷವಾಗಿರುವ ವೈಎಸ್‌ಆರ್ ಪಕ್ಷದಿಂದ ಮುಖ್ಯ ಮಂತ್ರಿಯಾಗಿದ್ದ ಜಗನ್ ಮೋಹನ್ ರೆಡ್ಡಿ ಸರಕಾರದ ಮೇಲೆ ಪ್ರಸ್ತುತ ಚಂದ್ರ ಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಏನೇ ಘಟನೆ ನಡೆದರೂ ಕೂಡ ಕೂಡಲೇ ಪ್ರತಿಕ್ರಿಯಿಸುವ ಪ್ರಧಾನಿಯವರು ತಿರುಪತಿ ಲಡ್ಡು ವಿಚಾರದಲ್ಲಿ ಮೌನ ತಾಳಿರುವುದು ಸಂಶಯಕ್ಕೆ ಕಾರಣವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಮೋದಿಯವರು ಲಡ್ಡು ವಿವಾದವನ್ನು ಕೂಲಕುಂಷವಾಗಿ ತನಿಖೆ ನಡೆಸಬೇಕು. ಸಣ್ಣ ಸಣ್ಣ ವಿಚಾರಗಳಿಗೆ ಒಡೋಡಿ ಬರುವ ಕೇಂದ್ರದ ತನಿಖಾ ಸಂಸ್ಥೆಗಳಾದ ಸಿ.ಬಿ.ಐ ಇ.ಡಿ ಇವುಗಳ ಮೂಲಕವೇ ತನಿಖೆ ನಡೆಸಿ ದೇಶದ ಜನತೆಗೆ ನ್ಯಾಯ ಒದಗಿ ಸುವ ಕೆಲಸ ಮೋದಿಯರು ಮಾಡಲಿ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News