ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಡಿಎಚ್‌ಓ ಗಡಾದ್

Update: 2024-09-24 14:22 GMT

ಉಡುಪಿ: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ್ ಹೇಳಿದ್ದಾರೆ.

ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ- ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2024 ಹಾಗೂ ಪೌರಕಾರ್ಮಿಕರ ಸಾಮಾನ್ಯ ಆರೋಗ್ಯ ತಪಾಸಣಾ ಕಾರ್ಯಕ್ರಮ ನಗರಸಭೆ ಸತ್ಯ ಮೂರ್ತಿ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಡುತ್ತಿರುವ ಕಾರಣದಿಂದ ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗುತ್ತಿದೆ. ಕೆಲಸದ ಒತ್ತಡ ದಲ್ಲಿ ಮಾಡುವ ಕೆಲವೊಂದು ನಿರ್ಲಕ್ಷ್ಯತನದಿಂದ ನಮ್ಮ ಆರೋಗ್ಯ ಹಾಳಾಗುತ್ತಿದೆ. ಪೌರಕಾರ್ಮಿಕರು ಆರೋಗ್ಯ ತಪಾ ಸಣೆ ಶಿಬಿರ ಗಳಿಗೆ ಸೀಮಿತವಾಗದೇ ನಿತ್ಯ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಡಾ ಗಡಾದ್ ಹೇಳಿದರು.

ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಅಶೋಕ್ ಮಾತನಾಡಿ, ಪೌರಕಾರ್ಮಿಕರು ಆರೋಗ್ಯವಾಗಿದ್ದರೆ ಇಡೀ ನಗರ ಆರೋಗ್ಯ ವಾಗಿರುತ್ತದೆ. ಪೌರಕಾರ್ಮಿಕರು ಆರೋಗ್ಯವಂತರಾಗಿದ್ದರೆ ನಗರದ ಸ್ವಚ್ಛತೆಯನ್ನು ಕಾಪಾಡಿ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ಆದುದರಿಂದ ಅವರು ಜಿಲ್ಲಾಸ್ಪತ್ರೆಯಲ್ಲಿರುವ ಆರೋಗ್ಯ ಸೇವೆಯ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನಗರಸಭಾ ಪೌರಾಯುಕ್ತ ರಾಯಪ್ಪ ಮಾತನಾಡಿ, ಇಂದಿನ ಜೀವನ ಶೈಲಿಯಿಂದ ಕಾಯಿಲೆಗಳು ನಮ್ಮನ್ನು ಆಳುವಂತಾಗಿದೆ. ಮನೆಯ ಆಹಾರಕ್ಕಿಂಥ ಹೊರಗಿನ ಆಹಾರವನ್ನೇ ಹೆಚ್ಚು ಬಳಸುತ್ತಿದ್ದೇವೆ. ಹೀಗಾಗಿ ಆರೋಗ್ಯ ಹಾಳಾಗುತ್ತಿದೆ. ನಾವು ದುಶ್ಚಟಗಳಿಂದ ದೂರ ಇದ್ದಾಗ ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಪೌರ ಕಾರ್ಮಿಕರು ಉತ್ತಮ ಆಹಾರ ಸೇವಿಸುವುದರೊಂದಿಗೆ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.

ಈ ಸಂದರ್ಭ ಮಣಿಪಾಲದ ಪಬ್ಲಿಕ್ ಹೆಲ್ತ್ ಡೆಂಟಿಸ್ಟ್ ಡಾ. ಅನುಷಾ, ಪ್ರಸಾದ್ ನೇತ್ರಾಲಯದ ವೈದ್ಯೆ ಡಾ. ಕೀರ್ತಿ, ಮಣಿಪಾಲ ಪ್ರಸಾದ್ ಕ್ಲಿನಿಕ್‌ನ ವೈದ್ಯರು ಮತ್ತು ಸಿಬ್ಬಂದಿಗಳು, ಜಿಲ್ಲಾ ಕನ್ಸಲ್ಟೆಂಟ್ ಮಂಜುಳಾ ಶೆಟ್ಟಿ, ನಗರಸಭೆಯ ವ್ಯವಸ್ಥಾಪಕ ಎಸ್.ಎಸ್.ನಾರಾಯಣ, ಆರೋಗ್ಯ ನಿರೀಕ್ಷಕ ರಾದ ಮನೋಹರ್, ಸುರೇಂದ್ರ ಹೋಬಳಿದಾರ್, ಹರೀಶ್ ಬಿಲ್ಲವ, ಸೂಪರ್‌ವೈಸರ್‌ಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾ ಡಿದರು. ನಗರಸಭೆಯ ಪರಿಸರ ಅಭಿಯಂತರ ರಾದ ಸ್ನೇಹಾ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News