ವಾರದಲ್ಲಿ ನಾಲ್ಕು ದಿನ ಪೌಷ್ಟಿಕ ಆಹಾರವಾಗಿ ಮೊಟ್ಟೆ ವಿತರಣೆ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-09-25 15:16 GMT

ಉಡುಪಿ, ಸೆ.25: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ, ಬಾಳೆಹಣ್ಣುಗಳನ್ನು ಈವರೆಗೆ ವಿತರಿಸಲಾಗುತ್ತಿತ್ತು.

ಇದೀಗ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಬೋರ್ಡ್ ಹೈಸ್ಕೂಲ್) ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರು ಬುಧವಾರ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆ ಯಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಮಕ್ಕಳು ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜ ನೆಯು ಸಹಕಾರಿಯಾಗಿದೆ ಎಂದರು.

ಸರಕಾರರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಾರದ ಎಲ್ಲಾ ದಿನಗಳಲ್ಲೂ ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪ್ಟೌಷಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು 1500 ಕೋಟಿ ರೂ.ಗಳಿಗೂ ಅಧಿಕ ಅನುದಾನ ನೀಡಿರುವ ಕ್ರಮ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಪಿಎಂ ಪೋಷನ್ ಶಕ್ತಿ ನಿರ್ಮಾಣ- ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಡಾ.ಅಶೋಕ ಕಾಮತ್, ಡಯಟ್‌ನ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ತಾಲೂಕು ಸಹಾಯಕ ನಿರ್ದೇಶಕರು ವಿವೇಕ ಗಾಂವ್ಕರ್, ಕಾಲೇಜಿನ ಪ್ರಾಂಶುಪಾಲ ಲೀಲಾಬಾಯಿ ಭಟ್, ಉಪ ಪ್ರಾಂಶುಪಾಲೆ ಭಾಗೀರಥಿ ಮತ್ತಿತರರು ಉಪಸ್ಥಿತರಿದ್ದರು.






 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News