ವಿವಿಧ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಆಹ್ವಾನ

Update: 2024-09-26 13:59 GMT

ಉಡುಪಿ, ಸೆ.26: ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಇಪಿಇ) ಮತ್ತು ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ಸ್ಟೇಬಲ್ ಮತ್ತು ಅಸ್ಸಾಂ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ನೊಂದಣಿಗೆ ಅಕ್ಟೋಬರ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News