ಉಡುಪಿ ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಪ್ರಯತ್ನಿಸಿ: ಆರೋಗ್ಯ ಇಲಾಖೆಗೆ ಡಿಸಿ ಸೂಚನೆ

Update: 2024-09-27 15:19 GMT

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು ವೈದ್ಯರು ಹಾಗೂ ಸಿಬ್ಬಂದಿ ಮಾಡಿದಲ್ಲಿ ಮಾತ್ರ ತಾಯಿ ಹಾಗೂ ನವಜಾತ ಶಿಶುಗಳ ಮರಣ ಪ್ರಮಾಣವನ್ನು ತಡೆಗಟ್ಟಿ, ಶೂನ್ಯಕ್ಕಿಳಿ ಸಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ಇದಕ್ಕೆ ವಿಶೇಷ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮನ್ವಯ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಎಚ್‌ಐವಿ ಸೋಂಕಿತ ಮತ್ತು ಬಾಧಿತ ಮಕ್ಕಳಿಗೆ ಸರಕಾರದಿಂದ ನೀಡಲಾಗುತ್ತಿರುವ ವಿಶೇಷ ಪಾಲನಾ ಯೋಜನೆ ಎಲ್ಲ ರಿಗೂ ಲಭ್ಯವಾಗು ವಂತೆ ನೋಡಿಕೊಳ್ಳಬೇಕು. ವಸತಿ ಯೋಜನೆಗಳನ್ನು ಸ್ಥಳೀಯ ಸಂಸ್ಥೆಗಳು ಆದ್ಯತೆ ಮೇಲೆ ನೀಡಬೇಕು ಎಂದ ಅವರು, ಎಚ್‌ಐವಿ ಸೋಂಕಿತರಿಗ ವೈದ್ಯಕೀಯ ಚಿಕಿತ್ಸೆಯ ವ್ಯವಸ್ಥೆ, ಔಷಧೋಪಚಾರಗಳನ್ನು ಉಚಿತವಾಗಿ ಎ.ಆರ್.ಟಿ ಸೆಂಟರ್‌ಗಳಲ್ಲಿ ನೀಡಿ ವಿಶೇಷ ಕಾಳಜಿ ವಹಿಸಬೇಕು. ಇದರೊಂದಿಗೆ ಯುವಜನತೆಗೆ ಏಡ್ಸ್ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇವುಗಳ ಅನುಷ್ಠಾನವನ್ನು ಸರಕಾರದ ಮಾರ್ಗಸೂಚಿಯಂತೆ ನಿಗದಿತ ಕಾಲಾ ವಧಿಯಲ್ಲಿ ಕಾಲಕಾಲಕ್ಕೆ ಕೈಗೊಂಡು ಜನರ ಆರೋಗ್ಯ ಸುಧಾರಣೆಗೆ ಮುಂದಾಗಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೈದ್ಯಕೀಯ ತ್ಯಾಜ್ಯಗಳ ಬಗ್ಗೆ ನಿಗಾ: ಆರೋಗ್ಯ ಸಂಸ್ಥೆಗಳಲ್ಲಿ ಉತ್ಪತ್ತಿ ಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಇವುಗಳನ್ನು ಸಂಗ್ರಹಿಸುವ ಏಜೆನ್ಸಿಗಳು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಬೇಕು. ಅಲ್ಲದೆ ಔಷಧಿ ಬಾಟಲ್‌ಗಳು, ಡೈಪರ್‌ಗಳನ್ನು ಎಲ್ಲೆಂದರಲ್ಲಿ ಎಸೆದಲ್ಲಿ ನದಿಗೆ ಸೇರಿ ನೀರಿನ ಮಾಲಿನ್ಯ ಉಂಟಾಗುತ್ತದೆ. ಇವುಗಳ ನಿಯಂತ್ರಣಕ್ಕೆ ಸಹ ನಿಗಾ ವಹಿಸಬೇಕು. ಜನಸಾಮಾನ್ಯರು ಸಹ ತಮ್ಮ ಮನೆಗಳಲ್ಲಿ ಉಪಯೋಗಿಸಿದ ಸಿರಿಂಜ್‌ಗಳು ಮತ್ತಿತರ ವೈದ್ಯಕೀಯ ಉಪಕರಣಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿಸಲು ಅರಿವು ಮೂಡಿಸುವುದು ಸೂಕ್ತ ಎಂದರು.

ಕೆ.ಪಿ.ಎಂ.ಇ ಅಡಿಯಲ್ಲಿ ಅನುಮತಿ ಪಡೆದ ಕ್ಲಿನಿಕ್‌ಗಳು ಹಾಗೂ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ವೆಚ್ಚದ ದರಪಟ್ಟಿ ಯನ್ನು ಹಾಗೂ ವೈದ್ಯರ ಮೇಲಿನ ಹಲ್ಲೆ ಕುರಿತು ಜಾರಿಗೆ ತಂದಿರುವ ಕಾನೂನು ಬಗ್ಗೆ ಎದ್ದು ಕಾಣುವ ರೀತಿಯಲ್ಲಿ ಪ್ರದರ್ಶಿಸ ಬೇಕು ಎಂದ ಅವರು, ವೈದ್ಯಾಧಿಕಾರಿಗಳು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿಗಳನ್ನು ಮಾಡಬೇಕು ಎಂದು ಡಾ.ವಿದ್ಯಾ ಕುಮಾರಿ ಸೂಚನೆ ನೀಡಿದರು.

ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ಹೆಚ್ಚು ಮಂದಿ ರೋಗಿಗಳು ಬರುತ್ತಿದ್ದಾರೆ. ಎಲ್ಲರಿಗೂ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಹೊಸದಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆಯುಷ್ಮಾನ್ ಯೋಜನೆಯಡಿಯಲ್ಲಿ ಚಿಕಿತ್ಸೆ ಪಡೆಯುವಂತೆ ನಾಮ ನಿರ್ದೇಶನಗೊಳಿಸಲು ಸರಕಾರಕ್ಕೆ ಅನುಮೋದನೆಯನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಮಕ್ಕಳಿಗೆ ಲಸಿಕೆ: ಸಾರ್ವಜನಿಕ ಲಸಿಕಾ ಕಾರ್ಯಕ್ರಮದಡಿ ಎಲ್ಲಾ ಲಸಿಕೆ ಗಳನ್ನು ಮಕ್ಕಳಿಗೆ ಕಾಲಕಾಲಕ್ಕೆ ನೀಡಲು ಕ್ರಮ ವಹಿಸಬೇಕು. ಕುಷ್ಠರೋಗವನ್ನು ಆರಂಭಿಕ ಹಂತದಲ್ಲಿಯೇ ಕಂಡುಕೊಂಡು ಅದಕ್ಕೆ ಚಿಕಿತ್ಸೆ ನೀಡಿದ್ದಲ್ಲಿ ಅವರ ಆರೋಗ್ಯ ಸುಧಾರಣೆ ಆಗುತ್ತದೆ. ಈ ರೋಗ ಕಂಡುಬರುವ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ರೋಗದ ಪತ್ತೆ ಕಾರ್ಯವನ್ನು ಮಾಡುವುದು ಉತ್ತಮ ಎಂದು ಸಲಹೆ ನೀಡಿದರು.

ಸಮಾಜದಲ್ಲಿ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಕಾರ್ಯಸನ್ನದ್ಧರಾಗಬೇಕು. ಬಿಸಿಜಿ ಲಸಿಕೆ ಹಾಕಿಸಿ ಕೊಳ್ಳಲು ಜಿಲ್ಲೆಯಲ್ಲಿ ಒಟ್ಟು 45,857 ನೋಂದಣಿ ಮಾಡಿಸಿದ್ದು, ಬಿಸಿಜಿ ಲಸಿಕೆ ಜಿಲ್ಲೆಗೆ ಸರಬರಾಜು ಆದ ತಕ್ಷಣ, ಲಸಿಕೆ ನೀಡಲು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ. ಪಿ. ಗಡಾದ್, ಜಿಲ್ಲಾ ಸರ್ಜನ್ ಡಾ.ಅಶೋಕ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಜೋತ್ಸ್ನಾ ಬಿ.ಕೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿ ಕಾರಿಗಳು ಉಪಸ್ಥಿತರಿದ್ದರು.

ಲಿಂಗಾನುಪಾತ 1000:1015ಕ್ಕೆ ಏರಿಕೆ

ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಅಥವಾ ಲಿಂಗ ಪತ್ತೆಯಂತಹ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾಯ್ದೆಯ ನ್ವಯ ಕ್ರಮ ಕೈಗೊಳ್ಳಬೇಕು. ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಸಮಿತಿಯ ಸದಸ್ಯರುಗಳು ಅನಿರೀಕ್ಷಿತವಾಗಿ ನಿರಂತರ ಭೇಟಿ ಮಾಡಿ ಪರಿಶೀಲನೆ ನಡೆಸಬೇಕು ಎಂದ ಅವರು, ಪ್ರಸಕ್ತ ಸಾಲಿನ ಕಳೆದ 5 ತಿಂಗಳಲ್ಲಿ ಜಿಲ್ಲೆಯ ಲಿಂಗಾನುಪಾತ 1000 ಗಂಡು ಮಕ್ಕಳಿಗೆ 1015 ಹೆಣ್ಣು ಮಕ್ಕಳ ಜನನವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.







Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News