‘ಕ್ರೀಡೆಯಿಂದ ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಗುಣ’

Update: 2024-09-28 14:34 GMT

ಉಡುಪಿ, ಸೆ.28: ಕ್ರೀಡೆಯು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಗುಣವನ್ನು ಕಲಿಸುತ್ತದೆ. ಇದರ ಜೊತೆಗೆ ಮತ್ತೊಬ್ಬರ ಅರ್ಹ ಗೆಲುವನ್ನು ಸಂಭ್ರಮಿಸುವ ಮನೋಭಾವವನ್ನು ಸಹ ನಾವು ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಈ ಸಂದರ್ಭದಲ್ಲಿ ಪೌರಯುಕ್ತ ರಾಯಪ್ಪ, ವಾಲಿಬಾಲ್ ತರಬೇತುದಾರ ರಾಜೇಶ್ ಪತ್ತರ್, ಉಡುಪಿ ತಾಲೂಕು ಕ್ರೀಡಾಧಿ ಕಾರಿ ವಸಂತ್ ಜೋಗಿ, ಕಾಪು ತಾಲೂಕು ಕ್ರೀಡಾಧಿಕಾರಿ ರಿತೇಶ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ದಿನದಲ್ಲಿ ಪುರುಷರ ಹಾಗೂ ಮಹಿಳೆಯರ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟಗಳು ಜರಗಿದವು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News