ಗುಣಮಟ್ಟದೊಂದಿಗೆ ಸರಕಾರಿ ಶಾಲೆಗಳ ಉಳಿವಿಗೆ ಪ್ರಯತ್ನ ಅಗತ್ಯ: ನ್ಯಾ.ಅಬ್ದುಲ್ ರಹೀಮ್

Update: 2024-09-29 14:28 GMT

ಕುಂದಾಪುರ: ಉತ್ತಮ ಶಿಕ್ಷಣದೊಂದಿಗೆ ಸರಕಾರಿ ಶಾಲೆಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ಮೂಲಕ ಸರಕಾರಿ ಶಾಲೆಗಳ ಉಳಿವಿಗೆ ಪ್ರಯತ್ನಿಸಬೇಕು ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ಸಹಯೋಗದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ವಕೀಲರ ಸಂಘ, ಬಾರ್ ಅಸೋಸಿಯೇಶನ್ ಕುಂದಾಪುರ, ಗೀತಾ ಎಚ್.ಎಸ್.ಎನ್. ಫೌಂಡೇಶನ್ ಕೋಟೇಶ್ವರ, ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆನೆಗುಡ್ಡೆ, ಶ್ರೀವಿನಾಯಕ ಸಭಾಗೃಹ ಕುಂಭಾಶಿ, ಮಗು ಮತ್ತು ಕಾನೂನು ಕೇಂದ್ರ, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿರ್ವಸಿಟಿ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ಸಭಾಗೃಹದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಆಯೋಜಿಸ ಲಾದ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಕ್ಕಳ ಹಕ್ಕುಗಳ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು, ಸಾಮಾಜಿಕ ವ್ಯವಸ್ಥೆ ಯಲ್ಲಿ ಶಿಕ್ಷಕರ ಜವಾಬ್ದಾರಿ ಅವರ ಕಾರ್ಯ ನಿರ್ವಹಣೆ ಶ್ರೇಷ್ಠವಾಗಿದೆ. ಈ ದಿಸೆಯಲ್ಲಿ ಶಿಕ್ಷಕರ ದಿನಾಚರಣೆಯ ಮೂಲಕ ಗುರುಗಳ ಮಹತ್ವವನ್ನು ಅರಿಯುವ ಕೆಲಸ ಪ್ರತಿಯೊಬ್ಬರಲ್ಲೂ ಆಗಬೇಕಾಗಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಗುರು ಹಿರಿಯರ ಬಗ್ಗೆ ತಿಳಿ ಹೇಳುವ ಕಾರ್ಯದಲ್ಲಿ ವ್ಯತ್ಯಾಸಗಳಾಗಿವೆ. ಇದರಿಂದ ಯುವ ಸಮುದಾಯ ದಿಕ್ಕು ಬದಲಾಗಿದೆ ಎಂದರು.

ಮಣೂರು-ಪಡುಕೆರೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅವರಿಗೆ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಯಾ ಸರಕಾರಿ ಪ್ರೌಢಶಾಲೆ ನಿವೃತ್ತ ಮುಖ್ಯೋಪಧ್ಯಾಯಿನಿ ಸುಮನಾ ಕಲ್ಯಾ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.

ಚಿತ್ತೂರು ಸರಕಾರಿ ಎಸ್.ಡಿ.ಎಂ.ಸಿ ನಿಕಟಪೂರ್ವ ಅಧ್ಯಕ್ಷ ರವಿರಾಜ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಶಸ್ತಿ, 14 ಮಂದಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಕುಂಭಾಶಿ, ವಳಕಾಡು, ಗುಜ್ಜಾಡಿ, ನಲ್ಲೂರು, ಗಂಟು ಬೀಳು, ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಅತ್ಯುತ್ತಮ ಎಸ್‌ಡಿಎಂಸಿ ಶಾಲೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್., ಹಿರಿಯ ಶ್ರೇಣಿ ನ್ಯಾಯಾಧೀಶ ಎಂ.ಪುರುಷೋತ್ತಮ ಶುಭ ಹಾರೈಸಿದರು. ಗೀತಾ ಎಚ್‌ಎಸ್‌ಎನ್ ಫೌಂಡಶೇನ್ ಅಧ್ಯಕ್ಷ ಶಂಕರ ಐತಾಳ್, ಮಂಗಳೂರು ಪಡಿಯ ನಿರ್ದೇಶಕ ರೆನ್ನಿ ಡಿಸೋಜ, ಮಂಗಳೂರು ಎಸ್‌ಡಿಎಂಸಿ ಸಿಸಿಸಿಎಫ್‌ನ ರಾಜ್ಯ ಸಂಚಾಲಕ ಮೊಯ್ದಿನ್ ಕುಟ್ಟಿ, ಉದ್ಯಮಿ ರವಿರಾಜ್ ಉಪಾಧ್ಯಾಯ, ವೇದಿಕೆಯ ಗೌರವ ಸಲಹೆಗಾರ್ತಿ ಮಲ್ಲಿಕಾ ಬಾಲಕೃಷ್ಣ ಪೂಜಾರಿ ಮೊದಲಾದ ವರು ಉಪಸ್ಥಿತರಿದ್ದರು.

ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಅಧ್ಯಕ್ಷ ಎಸ್.ವಿ.ನಾಗರಾಜ ಸ್ವಾಗತಿಸಿದರು. ಉಪಾಧ್ಯಕ್ಷ ರಾಜಶೇಖರ್ ಹಾಗೂ ಸಂಘಟನಾ ಕಾರ್ಯದರ್ಶಿ ಶೋಭಾ ಶಾಂತರಾಜ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಉಷಾ ರಮೇಶ್ ವಂದಿಸಿದರು.

‘ಮೊಬೈಲ್ ತಂತ್ರಜ್ಞಾನದ ಕಾಲಘಟ್ಟದಲ್ಲಿ ಯುವ ಜನತೆ ದಾರಿ ತಪ್ಪುತ್ತಿದೆ. ತಂತ್ರಜ್ಞಾನದ ಸದ್ಭಳಕೆ ಬಿಟ್ಟು ದುರ್ಬಳಕೆ ಹೆಚ್ಚಾಗುತ್ತಿದೆ. ಈ ಬಗ್ಗೆ ಪೋಷಕರು ಜಾಗೃತಿ ವಹಿಸುವ ಅಗತ್ಯತೆ ಇದೆ. ಶಿಕ್ಷಣದ ಜತಗೆ ಮಾನಸಿಕ, ದೈಹಿಕ ಕ್ಷಮತೆ ಕಾಪಾಡಿಕೊಳ್ಳಬೇಕು. ಸರಕಾರಿ ಶಾಲೆಗಳು ಅನುದಾನಿತ ಶಿಕ್ಷಣ ಸಂಸ್ಥೆಗಳ ಉಳಿವಿನಲ್ಲಿ ಶಾಲಾಭಿವೃದ್ಧಿ ಸಮಿತಿಗಳ ಹಾಗೂ ಶಿಕ್ಷಕರ ಪಾತ್ರ ಗಣನೀಯ ವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಪರಿಶ್ರಮದೊಂದಿಗೆ ಸರಕಾರಿ ಶಾಲೆಯಗಳ ಉಳಿವಿಗೆ ಪ್ರಯತ್ನಿಸಬೇಕು’

-ಅಬ್ದುಲ್ ರಹೀಮ್ ಹುಸೇನ್ ಶೇಖ್, ನ್ಯಾಯಾಧೀಶರು

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News