ವಿದ್ಯಾರ್ಥಿಗಳಿಗೆ ‘ಪುಸ್ತಕ ಓದಿ ಬಹುಮಾನ ಗೆಲ್ಲಿ’ ಸ್ಪರ್ಧೆ

Update: 2024-10-01 13:28 GMT

ಉಡುಪಿ, ಅ.1: ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಾಹಿತ್ಯ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿ ಗಳಿಗೆ ಪುಸ್ತಕ ಓದಿ ಬಹುಮಾನ ಗೆಲ್ಲಿ ಎಂಬ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ದಿವಂಗತ ಡಾ.ಉಪ್ಪಂಗಳ ರಾಮ ಭಟ್ಟರು ಬರೆದಿರುವ ಮರೆಯಲಾಗದ ಮಹನೀಯರು ಎಂಬ ಪುಸ್ತಕವನ್ನು ಆಧರಿಸಿ ‘ನಾ ಮೆಚ್ಚಿದ ವ್ಯಕ್ತಿತ್ವದ ಬಗ್ಗೆ’ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಂಕರಿ ಭಟ್ ಮಾತನಾಡಿ, ಕಲಿಕೆಗೆ ಮಾಧ್ಯಮ ತೊಡಕಲ್ಲ, ಆಸಕ್ತಿಯಿಂದ ಕಲಿತು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಎಸ್‌ಡಿಎಂಸಿ ಗೌರವಾಧ್ಯಕ್ಷೆ ತಾರಾದೇವಿ ಮಾತನಾಡಿದರು. ಈ ಎರಡೂ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಪುರಸ್ಕಾರ ನೀಡಲಾಯಿತು. ಸಂಸ್ಥೆಯ ಹಿರಿಯ ಶಿಕ್ಷಕಿ ಇಂದಿರಾ ಬಿ. ಸ್ವಾಗತಿಸಿದರು. ಶಿಕ್ಷಕಿ ನಾಗರತ್ನ ಹೆಗಡೆ ನಿರೂಪಿಸಿ ವಂದಿಸಿದರು. ಶಿಕ್ಷಕಿಯರಾದ ಮೀನಾಕ್ಷಿ, ಪ್ರತಿಭಾ ಮತ್ತು ಮಂಜುಳಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News