ಕೋಟ್ಪಾ ಕಾಯಿದೆಯ ನಾಮಫಲಕಗಳ ಹಸ್ತಾಂತರ
Update: 2024-10-01 13:31 GMT
ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಇವುಗಳ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ತಂಬಾಕು ನಿಯಂತ್ರಣದ ಬಗ್ಗೆ ಸ್ಫರ್ಧೆಯನ್ನು ಏರ್ಪಡಿಸಲಾಗಿದ್ದು ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಸ್ಪರ್ಧೆಯ ಬಹುಮಾನ ವಿಜೇತ ವಿದ್ಯಾರ್ಥಿಗಳ ಶಾಲಾ ಮುಖ್ಯಸ್ಥರುಗಳಿಗೆ ಬಹುಮಾನದ ಕಿಟ್ ಹಾಗೂ ಕೋಟ್ಪಾಕಾಯಿದೆಯ ಸೆಕ್ಷನ್(4) ಮತ್ತು ಸೆಕ್ಷನ್ 6(ಬಿ)ಯ ನಾಮಫಲಕ ಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ್, ಜಿಲ್ಲಾ ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಇಸಿಒ ಸುಮಾ, ಪವನ್ ಕುಮಾರ್ ಉಪಸ್ಥಿತರಿದ್ದರು.