ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಲು ಸೂಚನೆ
Update: 2024-10-02 14:44 GMT
ಉಡುಪಿ, ಅ.2: ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿ ಅಧಿಸೂಚನೆ ಹೊರಡಿಸಿದ್ದು ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತ ಜಾರಿಯಲ್ಲಿದೆ.
ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶ ದಿಂದ ತಾಲೂಕುಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಸದರಿ ಚುನಾವಣಾ ಮಾದರಿ ನೀತಿ ಸಂಹಿತೆ ಅಕ್ಟೋಬರ್ 28ರವರೆಗೆ ಜಾರಿ ಯಲ್ಲಿರುತ್ತದೆ.
ನವರಾತ್ರಿ ಹಾಗೂ ಶಾರದೋತ್ಸವ ಹಬ್ಬದ ಸಂದರ್ಭಗಳಲ್ಲಿ ದಸರಾ ಆಚರಣೆಯ ಕಾರ್ಯಕ್ರಮವನ್ನು ನಡೆಸುವಂತಹ ಆಯೋಜಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಚುನಾವಣಾಧಿಕಾರಿಗಳ ನಿರ್ದೇಶನದಂತೆ ಕ್ರಮವಹಿಸುವಂತೆ ಸಹಾಯಕ ಚುನಾವಣಾಧಿಕಾರಿಯಾಗಿರುವ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.