ಉಡುಪಿ: ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

Update: 2024-10-02 14:48 GMT

ಉಡುಪಿ, ಅ.2: ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಉಡುಪಿ ನಗರಸಭೆಗಳು, ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬಸ್ ನಿಲ್ದಾಣದಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ವನ್ನು ಕೈಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸೇರಿದ ಅತಿಥಿಗಳು, ಗಣ್ಯರು ಹಾಗೂ ವಿದ್ಯಾರ್ಥಿಗಳು ಪರಿಸರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. ಬಳಿಕ ಅಜ್ಜರಕಾಡಿನ ಭುಜಂಗ ಪಾರ್ಕ್ ಸುತ್ತಮುತ್ತ ಸಹ ಸ್ವಚ್ಛತಾ ಕಾರ್ಯ ನಡೆದವು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಪೌರಾಯುಕ್ತ ರಾಯಪ್ಪ, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.






 


 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News