ಕೊಲ್ಲೂರು: ಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

Update: 2024-10-04 15:13 GMT

ಬಾಬು ಶೆಟ್ಟಿ 

ಕುಂದಾಪುರ, ಅ.4: ಕೊಲ್ಲೂರು ಶ್ರೀಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಮೊದಲ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರ ಸಹಾಯಕ ಆಯುಕ್ತರಾದ ಮಹೇಶ್ಚಂದ್ರ ಪ್ರಕ್ರಿಯೆ ನಡೆಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಧನಾಕ್ಷಿ, ಸುಧಾ ಕೆ., ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ.ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಉಪಸ್ಥಿತರಿದ್ದರು.

ಹಿಂದೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕೆ.ಬಾಬು ಶೆಟ್ಟಿ ಅವರು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿ, ಸಮಿತಿಯ ಕಾರ್ಯವ್ಯಾಪ್ತಿಯೊಳಗಡೆ ಸರ್ವ ಸದಸ್ಯರ ಒಗ್ಗೂಡುವಿಕೆಯಲ್ಲಿ ಕೆಲಸ ಮಾಡುತ್ತೇವೆ. ಕೊಲ್ಲೂರಿನಲ್ಲಿ ನಡೆಯುತ್ತಿರುವ ಯುಜಿಡಿ ಕಾಮಗಾರಿಯ ವಿಚಾರದಲ್ಲಿ ಜನರಿಗೆ ಸಮಸ್ಯೆಯಾಗದಂತೆ ಪ್ರಯತ್ನ ಮಾಡುತ್ತೇವೆ ಎಂದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News