ಅಧಿಕಾರಿಗಳ ಹೆಸರಲ್ಲಿ ಹಣ ಪಡೆದು ವಂಚನೆ: ಜನತೆ ಮುಂಜಾಗ್ರತೆ ವಹಿಸಲು ಕರೆ

Update: 2024-10-04 16:12 GMT

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರಲ್ಲಿ ಅನಧಿಕೃತ ವಾಗಿ ಉದ್ದಿಮೆ ಪರವಾನಿಗೆ, ಪ್ಲಾಸ್ಟಿಕ್ ರೈಡ್‌ಗಳನ್ನು ನಡೆಸಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಜನತೆ ಜಾಗೃತರಾಗಿರುವಂತೆ ನಗರಸಭೆ ತಿಳಿಸಿದೆ.

ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಗುರುತಿನ ಚೀಟಿಯೊಂದಿಗೆ ಬಂದಲ್ಲಿ ಮಾತ್ರ ಯಾವುದೇ ಉದ್ದಿಮೆ ಪರವಾನಿಗೆ ಸಮೀಕ್ಷೆ, ಪ್ಲಾಸ್ಟಿಕ್ ಕಾರ್ಯಾ ಚರಣೆಗೆ ಅಂಗಡಿ ಮಾಲಕರು ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಯಾವುದೇ ವ್ಯಕ್ತಿಗಳು ನಗರಸಭೆಯ ಹೆಸರಿನಲ್ಲಿ ವಂಚಿಸಿದಲ್ಲಿ ಅದಕ್ಕೆ ನಗರಸಭೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News