ಸಾಲಿಹಾತ್ ಶಿಕ್ಷಣ ಸಂಸ್ಥೆಯ ಬೋಧಕೇತರ ಸಿಬ್ಬಂದಿಗೆ ಸನ್ಮಾನ

Update: 2024-10-05 12:04 GMT

ಉಡುಪಿ, ಅ.5: ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇತ್ತಿಚಿಗೆ ಸುಧೀರ್ಘಾವಧಿ ಸೇವೆ ಸಲ್ಲಿಸಿದ ಬೋಧಕೇತರ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಛೇರಿ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷೀ ರತ್ನಾಕರ ಹಾಗೂ ಬಸ್ ಕಂಡಕ್ಟರ್ ಯಾಝ್ ಅಸಾದಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಶಾಲಾ ಮುಖ್ಯೋಪಾಧ್ಯಾಯಿನಿ ಸುನಂದ ಅವರನ್ನು ಅಭಿನಂದಿಸ ಲಾಯಿತು.

ಅತಿಥಿಯಾಗಿ ಸಮಾಜ ಸೇವಕ, ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿ ಸದಸ್ಯ ಇಕ್ಬಾಲ್ ಮನ್ನಾ ಉಡುಪಿ ಮಾತನಾಡಿ, ಒಂದು ಶಿಕ್ಷಣ ಸಂಸ್ಥೆಯ ಮುನ್ನಡೆಯಲ್ಲಿ ಬೋಧಕೇತರ ಸಿಬ್ಬಂದಿಗಳ ಪಾತ್ರ ಮುಖ್ಯ. ಇವರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.

ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ವಹಿಸಿದ್ದರು. ವೇದಿಕೆಯಲ್ಲಿ ಪಿಯು ಕಾಲೇಜಿನ ಪ್ರಾಂಶುಪಾಲೆ ದಿವ್ಯ ಪೈ, ಮುಖ್ಯ ಶಿಕ್ಷಕಿಯರಾದ ಅಲ್ ಶಿಫಾ ಶೇಕ್, ಸಾದತ್ ಆಸಿ್‌ ಮೊದಲಾದವರು ಉಪಸ್ಥಿರಿದ್ದರು.

ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನಾ, ಸ್ವಾಗತಿಸಿದರು. ಉಪನ್ಯಾಸಕಿ ನೀಮ ಕೌಸರ್ ವಂದಿಸಿದರು. ಉಪನ್ಯಾಸಕಿ ಚೇತನ ಎಸ್.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News