ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ: ಅರ್ಜಿಗಳ ಆಹ್ವಾನ

Update: 2024-10-05 15:00 GMT

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲಿರೋಸಿಸ್ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ತಿಂಗಳು 1000 ರೂ. ಪ್ರೋತ್ಸಾಹಧನ ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲಿರೋಸಿಸ್ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ವಿಶಿಷ್ಟ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ.75 ಮತ್ತು ಅದಕ್ಕಿಂತ ಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ.

ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಆರೈಕೆದಾರರ ಬ್ಯಾಂಕ್/ಅಂಚೆ ಕಛೇರಿ ಉಳಿತಾಯ ಖಾತೆಗೆ ಪ್ರೋತ್ಸಾಹ ಧನವನ್ನು ಜಮೆ ಮಾಡಲಾಗುವುದು. ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಅಕ್ಟೋಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ದೂರವಾಣಿ ಸಂಖ್ಯೆ:0820-2574810 ಹಾಗೂ ಎಂಆರ್‌ಡಬ್ಲ್ಯೂ ಅಥವಾ ವಿಆರ್‌ಡಬ್ಲ್ಯೂ/ಯುಆರ್‌ಡಬ್ಲ್ಯೂ ಅವರನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News