ಉಡುಪಿ: ರೆಡ್‌ಕ್ರಾಸ್‌ನಿಂದ ಸ್ವಚ್ಛತಾ ಕಾರ್ಯಕ್ರಮ

Update: 2024-10-05 15:06 GMT

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ ಶನಿವಾರ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು.

ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲ್ಯಾಣಾಧಿಕಾರಿ ರತ್ನಾ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಅರಿವು ಮೂಡಿಸ ಬೇಕು. ಆಗ ಅದು ಅವರ ವ್ಯಕ್ತಿತ್ವದಲ್ಲಿ ರೂಢಿಗತ ವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಲಾಯಿತು.ವಿದ್ಯಾರ್ಥಿಗಳು ಮತ್ತು ರೆಡ್‌ಕ್ರಾಸ್ ವಿಕಲಚೇತನರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು, ನಿಕಟ ಪೂರ್ವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ., ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್, ಖಜಾಂಚಿ ರಮಾದೇವಿ, ಲಯನ್ಸ್ ಕ್ಲಬ್‌ನ ಅನಂತ ಶೆಟ್ಟಿ, ರೇಖಾ ಎ. ಶೆಟ್ಟಿ, ನೋಡಲ್ ಅಧಿಕಾರಿ ಜಯಶ್ರೀ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News