ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Update: 2024-10-05 15:07 GMT

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಈ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭಗಳಿಂದ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ವೆಬ್‌ಸೈಟ್ - https://sevasindhu.karnataka.gov.in/-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸ ಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:೦೮೨೦-೨೫೭೪೮೯೨ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News