ಬೈಂದೂರು: ಕಾಂಗ್ರೆಸ್ ಪಕ್ಷಕ್ಕೆ ಹಲವು ಮಂದಿ ಸೇರ್ಪಡೆ

Update: 2024-10-06 15:07 GMT

ಕುಂದಾಪುರ, ಅ.6: ಪ್ರತೀ ಬೂತ್ ಮಟ್ಟದಿಂದಲೂ ನೈಜ ಕಾರ್ಯರ್ತರನ್ನು ಗುರುತಿಸಿ ಅವರಿಗೆ ನಾಯಕತ್ವ ಬಲವನ್ನು ನೀಡಿ ಪಕ್ಷ ಕಟ್ಟುವ ಕೆಲಸ ನಿರಂತರವಾಗಿ ನಡೆಯಲಿದೆ ಎಂದು ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದ್ದಾರೆ.

ಕಟ್ಬೇಲ್ತೂರಿನ ಅವರ ನಿವಾಸದಲ್ಲಿ ರವಿವಾರ ಸಂಜೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೂತನವಾಗಿ ಸೇರ್ಪಡೆಯಾದವರನ್ನು ಸ್ವಾಗತಿಸಿ ಅವರು ಮಾತನಾಡಿದರು.

ಇಂದು ಪಕ್ಷಕ್ಕೆ ಸೇರ್ಪಡೆಯಾದ ಹಿಂದುಳಿದ ವರ್ಗಗಳ ನಾಯಕರು ಹಾಗೂ ಅವರ ಬೆಂಬಲಿಗರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಒಪ್ಪಿಪಕ್ಷಕ್ಕೆ ಸೇರ್ಪಡೆ ಯಾಗಿರುವುದ ರಿಂದ, ನನ್ನ ಮತ ಹೊಂದಿರುವ ಬೂತ್ಗಳಲ್ಲಿ ಈ ಹಿಂದಿನಂತೆ ಅಧಿಕ ಮತವನ್ನು ಪಡೆಯುವ ವಿಶ್ವಾಸಗಳು ಮೂಡಿದೆ. ಕ್ಷೇತ್ರದ ಅಭಿವೃದ್ದಿಗಾಗಿ ಅನುದಾನವನ್ನು ನೀಡುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಗಳನ್ನು ಕೋರಿ ಕೊಂಡಿದ್ದು, ಅನುದಾನ ದೊರಕುವ ನಿರೀಕ್ಷೆಗಳಿವೆೆ. ಕ್ಷೇತ್ರದ ಅಭಿವೃದ್ದಿಗಾಗಿ ನನ್ನ ಪ್ರಯತ್ನ ನಿರಂತರವಾಗಲಿದೆ ಎಂದರು.

ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಹೆಮ್ಮಾಡಿಯ ಪಂಚಗಂಗಾ ಸೊಸೈಟಿಯ ಚುನಾವಣೆಯಲ್ಲಿ ಪಕ್ಷದ ಹಾಗೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರು ಕಟಿಬದ್ದರಾ ಗಬೇಕು ಎಂದು ಅವರು ಹೇಳಿದರು.

ನೂತನವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕಟ್ಬೇಲ್ತೂರು ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್ ಪುತ್ರನ್ ಮಾತ ನಾಡಿ, ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬಲಗೊಳಿಸುವ ನಿಟ್ಟಿನಲ್ಲಿ ಇನ್ನಷ್ಟು ಮಂದಿಯನ್ನು ಕರೆತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಹೆಮ್ಮಾಡಿ ಗ್ರಾಪಂ ಮಾಜಿ ಅಧ್ಯಕ್ಷ ಯು.ಸತ್ಯನಾರಾಯಣ್ ರಾವ್ ಹಾಗೂ ಕಟ್ಬೇಲ್ತೂರು ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್ ಪುತ್ರನ್ ತಮ್ಮ ಬೆಂಬಲಿಗ ರೊಂದಿಗೆ ಗೋಪಾಲ ಪೂಜಾರಿಯವರಿಂದ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು

ಹೆಮ್ಮಾಡಿ ಗ್ರಾಪಂ ಅಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಸುಧಾಕರ್ ಎನ್. ದೇವಾಡಿಗ, ಜಲಜ ಮೊಗವೀರ, ಶಕಿಲಾ, ಗೋಳಿಹೊಳೆ ಗ್ರಾಪಂ ಅಧ್ಯಕ್ಷ ವಸಂತ ಹೆಗ್ಡೆ ಉಪಸ್ಥಿತರಿದ್ದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್ಕುಮಾರ್ ಶೆಟ್ಟಿ ಗುಡಿಬೆಟ್ಟು ಸ್ವಾಗತಿಸಿದರು. ಜಿಲ್ಲಾ ಕೆಡಿಪಿ ಸದಸ್ಯ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News