ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2024-10-06 15:31 GMT

ಉಡುಪಿ, ಅ.6: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂತೆಕಟ್ಟೆ ಮಧುವನ ಬಾರ್ ಬಳಿಯ ಅಂಡರ್ ಪಾಸ್‌ನ ರಾಹೆ-66ರಲ್ಲಿ ಅ.4ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಶಿವಾನಂದ(30) ಎಂದು ಗುರುತಿಸಲಾಗಿದೆ. ಅಪರಿಚಿತ ವಾಹನ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಶಿವಾನಂದ ಅವರಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ತಡರಾತ್ರಿ ವೇಳೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಅಪಘಾತ ನಡೆಸಿದ ಬಳಿಕ ವಾಹನದ ಚಾಲಕ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸದೇ ಸ್ಥಳೀಯ ಠಾಣೆಗೆ ಮಾಹಿತಿ ನೀಡದೇ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News