ಗ್ರಾಪಂ ನೌಕರರ ಅನಿರ್ದಿಷ್ಟಾವಧಿ ಧರಣಿ ಮುಷ್ಕರ ಮೂರನೆ ದಿನಕ್ಕೆ

Update: 2024-10-08 14:09 GMT

ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘ ಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆರ್‌ಡಿಪಿಆರ್ ಕುಟುಂಬದ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಆಗ್ರಹಿಸಿ ಮಣಿಪಾಲದ ರಜತಾದ್ರಿಯಲ್ಲಿರುವ ಉಡುಪಿ ಜಿಪಂ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಮುಷ್ಕರ ಎರಡನೇ ದಿನವಾದ ಮಂಗಳವಾರವೂ ಮುಂದುವರೆದಿದೆ.

ಧರಣಿ ಸ್ಥಳಕ್ಕೆ ಆಗಮಿಸಿದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಮಾಜಿ ಶಾಸಕ ಗೋಪಾಲ ಪೂಜಾರಿ ಅವರಿಗೆ ಧರಣಿ ನಿರತರು ಮನವಿ ಸಲ್ಲಿಸಿದರು.

ಈ ನ್ಯಾಯಯುತ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದು ಜನಪ್ರತಿನಿಧಿಗಳು ಭರವಸೆ ನೀಡಿದರು. ಈ ಅನಿರ್ದಿಷ್ಟಾವಧಿ ಮುಷ್ಕರ ದಿಂದ ಸಾರ್ವಜನಿಕರ ತುರ್ತು ಕಾರ್ಯಗಳಿಗೆ ಸಮಸ್ಯೆ ಉಂಟಾಗುತ್ತಿದ್ದು ರಾಜ್ಯ ಸರ್ಕಾರ ಮುಷ್ಕರ ನಿರತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸ್ಪಂದಿಸುವಂತೆ ಯಶ್‌ಪಾಲ್ ಸುವರ್ಣ ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಧರಣಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಮಂಜುನಾಥ್ ಪಿ.ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ರಾವ್, ರಾಜ್ಯ ಪರಿಷತ್ ಸದಸ್ಯ ಸಿದ್ದೇಶ್, ಪಂಚಾಯತ್ ನೌಕರರ ಸಂಘದ ಜಿಲ್ಲಾಧ್ಯಕ್ಷ ರಮೇಶ್, ವಿವಿಧ ಸಂಘಗಳ ಪದಾಧಿಕಾರಿಗಳಾದ ವಸಂತಿ, ಶಿವರಾಜ್, ನಾಗೇಂದ್ರ ಜೆ., ಗುರುಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News