ಬಾಕ್ಸಿಂಗ್‌ನಲ್ಲಿ ಅನುಶ್ರೀ ನಾಯ್ಕ್‌ಗೆ ಬೆಳ್ಳಿ ಪದಕ

Update: 2024-10-10 15:20 GMT

ಉಡುಪಿ, ಅ.10: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನರ್ಸ್ ತರಬೇತಿ ಪಡೆಯು ತ್ತಿರುವ ಅನುಶ್ರೀ ನಾಯ್ಕ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

ಅನುಶ್ರೀ ಅವರು ಮಹಿಳೆಯರ 52-54 ಕೆಜಿ ವಿಭಾಗದಲ್ಲಿ ಅದ್ಭುತ ಬಾಕ್ಸಿಂಗ್ ಕೌಶಲ್ಯ ಪ್ರದರ್ಶಿಸುವ ಮೂಲಕ ಬೆಳ್ಳಿಪದಕ ಪಡೆದರು. ಈ ಹಿಂದೆಯೂ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಜಯಿಸಿದ್ದಾರೆ.

ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅನುಶ್ರೀ ನಾಯ್ಕ್‌ರನ್ನು ಕೆಎಂಸಿಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ. ಅನುಶ್ರೀ ಅವರಿಗೆ ಬಾಕ್ಸಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯವಿದೆ. ಅವರು ಇನ್ನೂ ಹೆಚ್ಚಿನ ಸ್ಪರ್ಧೆಗಳಲ್ಲಿ ಭಾಗವಹಿಸಿ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News