ಅಂಬೇಡ್ಕರ್‌ಗೆ ಅವಹೇಳನ ಆರೋಪ: ಹಿಂದೂ ಜಾಗರಣ ವೇದಿಕೆಯ ಉಮೇಶ ನಾಯ್ಕ್ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯ

Update: 2024-10-11 17:31 GMT

ಉಡುಪಿ: ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ರಿಗೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣ ಗಳಲ್ಲಿ ಪೋಸ್ಟ್ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ನಿಯೋಗ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದೆ.

ಮತಾಂಧ ಉಮೇಶ್ ನಾಯ್ಕ್ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಯಿತು. ಉಡುಪಿ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಮನವಿ ಸ್ವೀಕರಿಸಿದರು.

ದಸಂಸ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಮುಖಂಡರಾದ ಶಾಮರಾಜ್ ಬಿರ್ತಿ, ಮಂಜು ನಾಥ ಗಿಳಿಯಾರು, ಶ್ಯಾಮ ಸುಂದರ ತೆಕ್ಕಟ್ಟೆ, ಕುಮಾರ್ ಕೋಟ, ಹರಿಶ್ಚಂದ್ರ ಕೆ.ಡಿ., ಶಿವಾನಂದ ಬಿರ್ತಿ, ಶಿವಾನಂದ ಮೂಡಬೆಟ್ಟು, ರಾಘವೇಂದ್ರ ಬೆಳ್ಳೆ, ಶ್ರೀಧರ ಕುಂಜಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News