ಪಿಕ್‌ಅಪ್ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2024-10-13 13:53 GMT

ಕಾಪು, ಅ.13: ಪಿಕ್‌ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.12ರಂದು ಮಧ್ಯಾಹ್ನ ವೇಳೆ ಕೊಪ್ಪಲಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಶಂಶುದ್ದೀನ್ ಮಹಮ್ಮದ್ ಆಲಿ ಸಾಹೇಬ್ ಎಂದು ಗುರುತಿಸಲಾಗಿದೆ. ಇವರು ಡಿವೈಡರನ್ನು ದಾಟಿ ಮಲ್ಲಾರು ಕೋಟೆ ರಸ್ತೆ ಕಡೆಗೆ ಹೋಗಲು ರಸ್ತೆಯ ಅಂಚಿನಲ್ಲಿ ನಿಂತುಕೊಂಡಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News