ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Update: 2024-10-14 14:36 GMT

ಉಡುಪಿ: ಪ್ರಪಂಚದಾದ್ಯಂತ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅವರಲ್ಲಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ ಜೀವನದ ಗುಣಮಟ್ಟವನ್ನು ಉತ್ತಮ ಗೊಳಿಸುವುದು ಮಾನಸಿಕ ಆರೋಗ್ಯ ದಿನದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ.ಲತಾ ನಾಯಕ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಬ್ರಹ್ಮಗಿರಿಯ ಬಾಲಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯರಾದ ಡಾ.ಋತಿಕಾ ಸಾಲ್ಯಾನ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಕ್ಯಾಥರಿನ್ ಜೆನಿಫರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಗಳನ್ನು ನೀಡಿದರು.

‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ ಇದು’ ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕುಮಾರ್ ನಾಯಕ್ ಹಾಗೂ ವಿಜಯ ನಾಯಕ್, ಸಾಮಾಜಿಕ ಕಾರ್ಯಕರ್ತೆಯರಾದ ಮನೋತಜ್ಞೆ ವಸಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರಭಾರ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ದೀಪ ಕಾರ್ಯಕ್ರಮ ನಿರೂಪಿಸಿ, ಶಾರದಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News