ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವಂತೆ ಪ್ರೇರೇಪಿಸಿ: ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್

Update: 2024-10-17 13:11 GMT

ಉಡುಪಿ, ಅ.17: ಚುನಾವಣೆ ದಿನ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯಲ್ಲಿ ಮತದಾನದ ಅರ್ಹತೆ ಪಡೆದಿರುವ ಪ್ರತಿಯೊಬ್ಬ ಮತದಾರನೂ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು. ಚುನಾವಣೆಯಲ್ಲಿ ಬಿಜೆಪಿಯ ಗೆಲುವು ನಿಮ್ಮೆಲ್ಲರ ಪರಿಶ್ರಮದಿಂದ ಮಾತ್ರ ಸಾಧ್ಯ ಎಂದು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕಿಶೋರ್‌ಕುಮಾರ್ ಪುತ್ತೂರು ಹೇಳಿದ್ದಾರೆ.

ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಉಡುಪಿ ನಗರಸಭೆ ಸದ್ಯಸರ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಸಂಸದರಾಗಿ ಆಯ್ಕೆಯಾಗಿರುವ ನಮ್ಮ ಹಿರಿಯರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಿಮ್ಮೆ ಲ್ಲರ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಕೆಲಸ ಮಾಡುತ್ತೇನೆ ಎಂದವರು ನಗರಸಭಾ ಸದಸ್ಯರಿಗೆ ಭರವಸೆ ನೀಡಿದರು.

ಸಭೆಯಲ್ಲಿ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಉಡುಪಿ ಶಾಸಕ ಯಶಪಾಲ್ ಸುವರ್ಣ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ರೇಷ್ಮಾ ಉದಯ ಶೆಟ್ಟಿ, ಮಂಡಲ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹಾಗೂ ನಗರ ಸಭೆ ಎಲ್ಲಾ ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.

ಅಂಬಲಪಾಡಿ: ಅಂಬಲ್ಪಾಡಿಯಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ಕುರಿತು ಪಂಚಾಯತ್ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಿಶೋರ್ ಕುಮಾರ್ ಕಳೆದ ಅನೇಕ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿ ಕೆಲಸ ಮಾಡುತಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಅವ ಕಾಶ ಕಲ್ಪಿಸಿದ್ದು, ಚುನಾವಣೆಯ ದಿನ ನಾವೆಲ್ಲರೂ ಒಗ್ಗಟ್ಟಿನಿಂದ ಮತ ಚಲಾಯಿಸಿ ಅವರನ್ನು ಗೆಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೆ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News