ವಾಲ್ಮೀಕಿ ಬದುಕು ಎಲ್ಲರಿಗೂ ಪ್ರೇರಣೆಯಾಗಲಿ: ಮಹೇಶ್ಚಂದ್ರ

Update: 2024-10-17 14:06 GMT

ಕುಂದಾಪುರ, ಅ.17: ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಬದುಕಿಗೆ ಪ್ರೇರಣೆಯಾಗಿಸಿಕೊಂಡರೆ ಜೀವನ ಬದಲಾ ಗಬಹುದು ಎನ್ನಲು ಸೂಕ್ತ ನಿದರ್ಶನ ಎಂದು ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ. ಹೇಳಿದ್ದಾರೆ.

ಗುರುವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕುಂದಾಪುರ ವಿಭಾಗ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು., ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್., ತಾಲೂಕು ಆರೋಗ್ಯಾಧಿ ಕಾರಿ ಡಾ. ಪ್ರೇಮಾನಂದ, ಮೆಸ್ಕಾಂ ಎಇಇ ವಿಜಯಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವೆರ್ಣೇಕರ್, ಅಕ್ಷರ ದಾಸೋಹ ಅಧಿಕಾರಿ ಅರುಣ್‌ಕುಮಾರ್ ಶೆಟ್ಟಿ, ಬಿಸಿಎಂ ಅಧಿಕಾರಿ ಶಶಿಕಲಾ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಅಧಿಕಾರಿ ಗಣೇಶ್ ಜನ್ನಾಡಿ, ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಪಂಚಾಯತ್‌ರಾಜ್ ತರಬೇತುದಾರ ಮೋಹನಚಂದ್ರ ಕಾಳಾವರ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿಯರಾದ ಪ್ರಭಾವತಿ ಶೆಟ್ಟಿ, ಸುಜಯ, ಬೇಬಿ, ಭಾಗ್ಯವತಿ ಮೊದಲಾದವರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ್ ರಮೇಶ್ ಕುಲಾಲ್ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News