ಜಾರ್ಖಂಡ್ ಚುನಾವಣೆ: ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

Update: 2024-10-17 15:42 GMT

ಮಂಗಳೂರು: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕಗೊಳಿಸಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್, ಗೌರವ್ ಗೊಗಾಯ್, ಮೋಹನ್ ಮರ್ಕಮ್ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News