ಉಡುಪಿ: ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ

Update: 2024-10-18 15:38 GMT

ಉಡುಪಿ, ಅ.18: ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಮತ್ತೋರ್ವ ಬಾಂಗ್ಲಾದೇಶದ ವಲಸಿಗನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಉಡುಪಿ ಸಂತೆಕಟ್ಟೆಯಲ್ಲಿ ಇಂದು ಬಾಂಗ್ಲಾದೇಶದ  ಜಹಾಂಗೀರ್ ಆಲಂ(24) ಎಂಬಾತನನ್ನು ಬಂಧಿಸಿದ್ದಾರೆ. ಈತ ಮೂಡಬಿದಿರೆಯಲ್ಲಿ ಕೆಲಸ ಮಾಡಿಕೊಂಡಿದ್ದನು. ಈತನನ್ನು ಪೊಲೀಸರು ಅ.19ರಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಕೆಲವು ದಿನಗಳ ಹಿಂದೆ ಮಲ್ಪೆಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಏಳು ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಗಾಗಿ ಇವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕಾರ್ಕಳದಲ್ಲಿ ಇಬ್ಬರನ್ನು ಬಂಧಿಸಿದ್ದರು. ಇದೀಗ ಮತ್ತೋರ್ವನನ್ನು ಬಂಧಿಸಿದ್ದಾರೆ.

ಏಳು ಮಂದಿಯ ಪೊಲೀಸ್ ಕಸ್ಟಡಿ ಅವಧಿ ಅ.19ರಂದು ಮುಗಿಯಲಿ ರುವುದರಿಂದ ಅವರನ್ನು ನಾಳೆ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News