ಶ್ರೀವಿಶ್ವೇಶತೀರ್ಥ ಪ್ರಶಸ್ತಿಗೆ ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ಆಯ್ಕೆ

Update: 2024-10-21 16:25 GMT

ಉಡುಪಿ: ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ ಬಂದು ರಜತ ಪರ್ವದ ಲ್ಲಿರುವ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದ ಸಂಸ್ಥೆ, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ.

ಯಕ್ಷಗಾನ ಕಲಾರಂಗ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000 ರೂ. ಹೆಚ್ಚಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ನ.17ರ ರವಿವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ ಮೆಂಟ್, ಟ್ರೈನಿಂಗ್ ರಿಸರ್ಚ್ ಸೆಂಟರ್ ನಲ್ಲಿ ಜರಗಲಿದೆ.

ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News