ಮೈಸೂರಿನಲ್ಲಿ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ

Update: 2024-10-23 16:09 GMT

ಉಡುಪಿ, ಅ.23: ಕೇಂದ್ರೀಯ ಕಾರ್ಮಿಕ ಸಂಘಟನೆ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ನ ಕರ್ನಾಟಕ ರಾಜ್ಯ ಸಮಿತಿಯು ಅ.26 ಮತ್ತು 27ರಂದು ಮೈಸೂರಿನಲ್ಲಿ ಎರಡು ದಿನಗಳ ಕಾಲ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವನ್ನು ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದೆ ಎಂದು ಸಮಿತಿಯ ರಾಜ್ಯ ಉಪಾಧ್ಯಕ್ಷ ಕೆ.ವಿ.ಭಟ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಲುವ ಬಂಡವಾಳಶಾಹಿ ವರ್ಗದ ಕ್ರೂರ ಶೋಷ ಣೆಯ ವಿರುದ್ಧ ಕಾರ್ಮಿಕ ಹೋರಾಟವನ್ನು ಬಲಪಡಿಸಲು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರಬಲ ಕಾರ್ಮಿಕ ಚಳವಳಿಯನ್ನು ರೂಪಿಸಲು ರಾಜ್ಯಮಟ್ಟದ ಈ ಕಾರ್ಮಿಕ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದರು.

ಇದರ ಭಾಗವಾಗಿ ಕಾರ್ಮಿಕ ಬೃಹತ್ ಮೆರವಣಿಯನ್ನು ಬೆಳಗ್ಗೆ 11 ಗಂಟೆಗೆ ನಂಜರಾಜ ಅರಸ್ ಛತ್ರದಿಂದ ಪುರಭವನ ಮೈದಾನದವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ 2000ಕ್ಕೂ ಅದಿಕ ಮಂದಿ ಕಾರ್ಮಿಕರು ಅಲ್ಲಿ ನಡೆಯುವ ಬಹಿರಂಗ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಎಐಯುಟಿಯುಸಿ ಅಖಿಲ ಭಾರತ ಅಧ್ಯಕ್ಷರಾದ ಕೆ.ರಾಧಾಕೃಷ್ಣ ಅವರು ಅಧಿವೇಶನವನ್ನು ಉದ್ಘಾಟಿಸಲಿದ್ದು, ಪ್ರಧಾನ ಕಾರ್ಯದರ್ಶಿ ಶಂಕರ್‌ದಾಸ್ ಗುಪ್ತ ಮುಖ್ಯ ಭಾಷಣಕಾರರಾಗಿರುವರು.ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್, ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಮುಂತಾದವರು ಉಪಸ್ಥಿತರಿರುವರು ಎಂದು ತಿಳಿಸಿದರು.

ಅಂದು ಸಂಜೆ 5ರಿಂದ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಪ್ರತಿನಿಧಿ ಅಧಿವೇಶ ನಡೆಯಲಿದೆ. ರಾಜ್ಯ ಕಾರ್ಯದರ್ಶಿ ಕೆ.ಉಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಧಿವೇಶನದಲ್ಲಿ ಹಲವು ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಅವರು ಹೇಳಿದರು.

ಕಾರ್ಮಿಕರ ಕನಿಷ್ಠ ವೇತನವನ್ನು 35,000ರೂ.ಗೆ ನಿಗದಿ, ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕೆಂದು ಪರಿಗಣಿಸಿ, ಎಲ್ಲಾ ದುಡಿಯುವ ಕೈಗಳಿಗೆ ಖಾಯಂ ಉದ್ಯೋಗ ಒದಗಿಸಬೇಕು, ಕಾರ್ಮಿಕ ವಿರೋಧಿ ಲೇಬರ್ ಕೋಡ್‌ನ್ನು ರದ್ದು ಪಡಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಗಳನ್ನು ಒದಗಿಸಬೇಕು, ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸಬೇಕು. ಆಶಾ ಕಾರ್ಯಕರ್ತೆಯರು ಸೇರಿದಂತೆ ಎಲ್ಲಾ ಸ್ಕೀಮ್ ಕಾರ್ಯಕರ್ತರಿಗೆ ವೇತನ ಹೆಚ್ಚಿಸುವಂತೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ತಾಲೂಕು ಅಧ್ಯಕ್ಷೆ ಶಾಂಭವಿ ಕುಲಾಲ್, ಕಾರ್ಕಳ ಅಧ್ಯಕ್ಷೆ ಯಶೋಧ, ಪ್ರಮೀಳಾ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News