ರೈಲಿನೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಮೃತ್ಯು

Update: 2024-10-25 14:51 GMT

ಉಡುಪಿ: ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕನೋರ್ವ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಬೆಂಗಳೂರಿನಿಂದ ಕಾರವಾರ ತೆರಳುವ ರೈಲು ಇಂದ್ರಾಳಿ ನಿಲ್ದಾಣದ ಫ್ಲಾಟ್‌ಫಾರ್ಮ್ ಸಂಖ್ಯೆ ಒಂದರಲ್ಲಿ ನಿಲುಗಡೆಯಾ ಗಿದ್ದು, ಈ ಸಂದರ್ಭ ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಗಮನಿಸಿದ ಡಾ.ಸ್ಟಿವನ್ ಜಾರ್ಜ್ ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿ ಮಾಹಿತಿ ನೀಡಿದರು.

ರೈಲ್ವೆ ಪೊಲೀಸ್ ನಿರೀಕ್ಷಕ ಮಧುಸೂಧನ್ ಸಮಕ್ಷಮದಲ್ಲಿ ಒಳಕಾಡು ಆ ವ್ಯಕ್ತಿಯನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಿ ದರು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಪ್ರಯಾಣಿಕ ದಾರಿ ಮಧ್ಯೆ ಮೃತಪಟ್ಟರು. ಯುವಕನ ಸಾವಿಗೆ ಕಾರಣ ತಿಳಿದು ಬಂದಿಲ್ಲ. ವೈದ್ಯಕೀಯ ಮರಣೋತ್ತರ ಪರೀಕ್ಷೆಯಿಂದ ಇನ್ನಷ್ಟೆ ತಿಳಿಯಬೇಕಾಗಿದೆ.

ಮೃತದೇಹವನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಕೇಂದ್ರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News