ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು
Update: 2024-10-30 16:38 GMT
ಕುಂದಾಪುರ, ಅ.30: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಬೀಜಾಡಿ ಗ್ರಾಮದ ಚಾತ್ರಬೆಟ್ಟು ಎಂಬಲ್ಲಿ ಅ.30ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಬೀಜಾಡಿ ಗ್ರಾಮದ ಸಂಜೀವ ಎಂದು ಗುರುತಿಸಲಾಗಿದೆ. ಇವರು ಸಮುದ್ರದಲ್ಲಿ ಮಿನಿ ಕೈರಂಪಣಿ ದೊಣಿಯಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದ ನೀರಿನ ರಬಸಕ್ಕೆ ದೊಣಿಯು ಮಗುಚಿ ಬಿತ್ತೆನ್ನ ಲಾಗಿದೆ. ಇದರಿಂದ ದೊಣಿಯಲ್ಲಿದ್ದ ಸಂಜೀವ ಸಮುದ್ರದ ನೀರಿಗೆ ಬಿದ್ದರು.
ಇದರ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಅವರು, ಕೋಟೇಶ್ವರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.