ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ಆಯೋಜನೆ

Update: 2024-11-04 16:20 GMT

ಉಡುಪಿ, ನ.4: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ನ.7ರಂದು ಬೆಳಗ್ಗೆ 10 ಗಂಟೆಯಿಂದ 9ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಫರ್ಧೆಗಳಲ್ಲಿ ವಿಜೇತರಾದ ಮಕ್ಕಳು ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ಇಲ್ಲಿ ನಡೆಯುವ ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ.

ಸ್ಪರ್ಧೆಯ ವಿವರ: ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ(ವೈಯಕ್ತಿಕ).

ವಿಜ್ಞಾನದಲ್ಲಿ ನೂತನ ಆವಿಷ್ಕಾರ: ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ. ಸೃಜನಾತ್ಮಕ ಕಲೆ: ಚಿತ್ರಕಲಾ ಸ್ಫರ್ಧೆ. ವಾದ್ಯ ಸಂಗೀತ: ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು, ಮತ್ತು ನಗಾರಿ ಹಾಗೂ ಅಂಗವಿಕಲ, ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News