ತಾಯಿ ಹೆಸರಿನಲ್ಲಿ ಒಂದು ಮರ ನೆಡುವ ಕಾರ್ಯಕ್ರಮ

Update: 2024-11-05 13:18 GMT

ಉಡುಪಿ: 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ 2023 ಅ.25ರಿಂದ 29ರವರೆಗೆ ಎಸ್‌ಡಿಎಂ ಆಯು ರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಉಡುಪಿಯ ವತಿಯಿಂದ ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ, ಆಯುರ್ವೇದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಎನ್‌ಸಿಐಎಸ್‌ಎಂ ನಿರ್ದೇಶನದಂತೆ ’ಏಕ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಪಟ್ಲ ಮೊರಾರ್ಜಿ ದೇಸಾಯಿ ಶಾಲೆ, ಕಳತ್ತೂರು ಮೊರಾರ್ಜಿ ದೇಸಾಯಿ ಕಾಪು ಮತ್ತು ಕುಂದಾಪುರ ಯಡಾಡಿ ಮತ್ಯಾಡಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 200 ಕ್ಕೂ ಹೆಚ್ಚು ಔಷಧೀಯ ಸಸಿಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಮಣ್ಣಿನ ಫಲವತ್ತತೆ, ಆರೋಗ್ಯಕರ ಜೀವನಶೈಲಿಯ ಮಹತ್ವ, ಆರೋಗ್ಯ ನಿರ್ವಹಣೆಯಲ್ಲಿ ಔಷಧೀಯ ಸಸ್ಯಗಳ ಮಹತ್ವ ಬಗ್ಗೆ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಮಕ್ಕಳಿಗೆ ಸಸ್ಯಗಳ ಮೇಲೆ ಹಾಗೂ ಅವುಗಳ ಔಷಧೀಯ ಉಪಯೋಗಗಳ ಬಗ್ಗೆ ಪೋಸ್ಟರ್ಗಳನ್ನು ಹಂಚಲಾಯಿತು. ಎಸ್‌ಡಿಎಂ ಕಾಲೇಜಿನ ಪ್ರಾಧ್ಯಾಪಕ ಡಾ. ಸುಮಾ ಮಲ್ಯ, ಡಾ. ತೇಜಸ್ವಿ ನಾಯ್ಕ್, ಡಾ.ಪೂರ್ಣಿಮಾ, ಡಾ.ರವಿಕೃಷ್ಣ ಎಸ್. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News