ಕುಂದಾಪುರ ಪುರಸಭೆ ಮ್ಯಾನ್ಯುವಲ್ ಸ್ಕ್ಯಾವೆಂಜರ್: ಆಕ್ಷೇಪಣೆ ಆಹ್ವಾನ
ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಕುರಿತು ಸಮೀಕ್ಷೆ ಯನ್ನು ಕಳೆದ ವಾರ ನಡೆಸಿದ್ದು, ಯಾವುದೇ ಸಾರ್ವಜನಿಕರು, ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಕ್ಷೇಮಾ ಭಿವೃದ್ದಿಗಾಗಿ ಕಾರ್ಯನಿರ್ವಹಿಸುವ ಯಾವುದೇ ಸರ್ಕಾರೇತರ ಸಂಘ-ಸಂಸ್ಥೆಗಳು, ಎನ್‌ಜಿಒ ಹಾಗೂ ಇತರರಿಂದ ಇದಕ್ಕೆ ಸಂಬಂಧಿಸಿದ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.
ಆದ್ದರಿಂದ ಪ್ರಸ್ತುತ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನುಯಲ್ ಸ್ಕ್ಯಾವೆಂಜರ್ ಪದ್ದತಿಯಲ್ಲಿ ತೊಡಗಿಸಿ ಕೊಂಡಿರುವ ವ್ಯಕ್ತಿಗಳು ಹಾಗೂ ಅನೈರ್ಮಲ್ಯ ಶೌಚಾಲಯಗಳು ಅಸ್ತಿತ್ವದಲ್ಲಿ ಕಂಡುಬಂದಿಲ್ಲ ಎಂದು ಸಮೀಕ್ಷೆಯಲ್ಲಿ ಕಂಡು ಬಂದಿದೆ.
ಈ ಕುರಿತು ಯಾವುದೇ ಆಕ್ಷೇಪಣೆ ಇದ್ದಲ್ಲಿ ಸಾರ್ವಜನಿಕರು ನವೆಂಬರ್ 15 ಒಳಗೆ ಪುರಸಭಾ ಕಛೇರಿಗೆ ಆಕ್ಷೇಪಣೆ ಸಲ್ಲಿಸ ಬಹುದು. ಯಾವುದೇ ಸೂಕ್ತ ಆಕ್ಷೇಪಣೆಗಳು ಬರದಿದ್ದಲ್ಲಿ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ಕುಂದಾಪುರ ಪುರಸಭಾ ವ್ಯಾಪ್ತಿ ಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಅನೈರ್ಮಲ್ಯ ಶೌಚಾಲಯಗಳು ಯಾವುದು ಇರುವುದಿಲ್ಲ ಎಂದು ಘೋಷಿಸಲಾಗುವುದು ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.