ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್‌ಗಳ ಸಮೀಕ್ಷೆ: ಆಕ್ಷೇಪಣೆ ಆಹ್ವಾನ

Update: 2024-11-07 16:09 GMT

ಉಡುಪಿ: ಬೈಂದೂರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಹಾಗೂ ಅನೈರ್ಮಲ್ಯ ಶೌಚಾಲಯಗಳ ಕುರಿತು ಸಮೀಕ್ಷೆಯನ್ನು ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲಾಗಿದ್ದು, ಈ ಸಮಯದಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಹಾಗೂ ಅನೈರ್ಮಲ್ಯ ಶೌಚಾಲಯ ಕಂಡುಬಂದಿಲ್ಲ. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕೆಲಸ ಮಾಡುತ್ತಿರುವ ಬಗ್ಗೆ ಯಾರು ಹೆಸರು ನೋಂದಾಯಿಸಿಲ್ಲ.

ಈ ಕುರಿತು ಯಾವುದೇ ಆಕ್ಷೇಪಣೆ ಇದ್ದಲ್ಲಿ ಸಾರ್ವಜನಿಕರು ಲಿಖಿತವಾಗಿ ಅಥವಾ ಖುದ್ದಾಗಿ ಬೈಂದೂರು ಹಾಗೂ ಸಾಲಿ ಗ್ರಾಮ ಪಟ್ಟಣ ಪಂಚಾಯತ್ ಕಛೇರಿಗೆ ನ.೧೫ರ ಒಳಗ ಆಕ್ಷೇಪಣೆ ಸಲ್ಲಿಸಬಹುದು. ಯಾವುದೇ ಆಕ್ಷೇಪಣೆ ಬರದಿದ್ದಲ್ಲಿ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ, ಬೈಂದೂರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಹಾಗೂ ಅನೈರ್ಮಲ್ಯ ಶೌಚಾಲಯಗಳು ಇರುವುದಿಲ್ಲ ಎಂದು ಘೋಷಿಸಲಾಗುವುದು ಎಂದು ಮುಖ್ಯಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News