ಸಾಹಿತಿ ಪ್ರೊ.ಕೃಷ್ಣೆ ಗೌಡ ಮೈಸೂರುಗೆ ‘ಕಾರಂತ ಹುಟ್ಟೂರ ಪ್ರಶಸ್ತಿ’ ಪ್ರದಾನ

Update: 2024-11-10 12:37 GMT

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಕೋಟ ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನಗಳ ಆಶ್ರಯದಲ್ಲಿ ಕೋಟತಟ್ಟು ಕಾರಂತ ಥೀಂ ಪಾರ್ಕ್‌ನಲ್ಲಿ ರವಿವಾರ ಆಯೋಜಿಸ ಲಾದ ಡಾ.ಕೋಟ ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಸಾಹಿತಿ ಪ್ರೊ.ಕೃಷ್ಣೆ ಗೌಡ ಮೈಸೂರು ಅವರಿಗೆ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರೊ.ಕೃಷ್ಣೆ ಗೌಡ, ಓರ್ವ ಶ್ರೇಷ್ಠ ಸಾಹಿತಿ ಈ ಮಣ್ಣಿನಲ್ಲಿ ಹುಟ್ಟವ ತಾಕತ್ತು ಮತ್ತೆಲ್ಲಿ ಕಾಣಲು ಸಾಧ್ಯ. ಕಾರಂತರೆಂದರೆ ಬಹು ವ್ಯಕ್ತಿತ್ವದ ಚಿಂತನಾಶೀಲ, ಪ್ರಯೋಗಶೀಲ ವಿವಿಧ ಸ್ತರದಲ್ಲಿ ಬೆಳಕ ಚೆಲ್ಲುವ ಅಪರೂಪದ ಶಕ್ತಿಯಾಗಿದ್ದರು. ಅವರಂತೆ ಎಲ್ಲರನ್ನು ಕಾಣಲು ಸಾಧ್ಯವಿಲ್ಲ ಅವರಿಗೆ ಅವರೇ ಸಾಟಿ ಎಂಬಂತೆ ತಮ್ಮ ಜೀವಿತ ಅವಧಿಯಲ್ಲಿ ಬದುಕಿ ತೊರಿಸಿದ್ದಾರೆ. ತನ್ನ ಕಾದಂಬರಿಯ ಮೂಲಕ ಪ್ರಪಂಚಕ್ಕೆ ನೈಜ ಚಿತ್ರಣದ ಚಿತ್ತಾರವನ್ನು ಪ್ರಯೋಗಿಸಿದ್ದಾರೆ ಎಂದರು.

ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪ್ರದಾನ ಮಾಡಿದ ಮೆಘಾಲಯದ ರಾಜ್ಯಪಾಲ ಸಿ.ಎಚ್.ವಿಜಯ ಶಂಕರ್ ಮಾತನಾಡಿ, ಕಾರಂತರ ಬದಕು ಅವರ ಹೋರಾಟದ ದಾರಿ ಹಲವು ಮಜಲುಗಳ ಕೇಂದ್ರವಾಗಿದೆ. ಕಾರಂತರು ಪಡೆದ ಜ್ಞಾನಪೀಠ ಈ ಜಗತ್ತಿಗೆ ಸದಾ ಹಸಿರಾಗಿ ಉಳಿದ ಶಾಶ್ವತ ಪೀಠವಾಗಿದೆ. ಅವರೊಬ್ಬ ಅಪರೂಪದ ಕನ್ನಡ ನಾಡೆ ಗೌರವ ನೀಡುವ ವ್ಯಕ್ತಿತ್ವವಾಗಿದೆ. ಕಾರಂತರ ಹೆಸರಿನಲ್ಲಿ ಒಂದು ಪಂಚಾಯತ್ ನೀಡುವ ಪ್ರಶಸ್ತಿ ನೀಡುತ್ತಿರು ವುದು ಎಲ್ಲ ಗ್ರಾಪಂಗಳಿಗೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮವನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಈ ವೇಳೆ ಅವಿಜಿತ ಜಿಲ್ಲೆಗಳ ಸಾಧಕ ಗ್ರಾಮಪಂಚಾಯತ್ ಗಳಿಗೆ ಕಾರಂತ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ.ಕುಂದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಿದ ಪ್ರಶಾಂತ್ ಸೂರ್ಯ ಅವರನ್ನು ಅಭಿನಂದಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಉಪ ವಿಬಾಗಾಧಿಕಾರಿ ಮಹೇಶ್ವಂದ್ರ, ಆಯ್ಕೆ ಸಮಿತಿಯ ಸಂಚಾಲಕ ಯು.ಎಸ್ ಶೆಣೈ, ಕೋಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಕುಂದರ್, ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಕಾರಂತ ಹುಟ್ಟೂರ ಪ್ರಶಸ್ತಿ ರೂವಾರಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಧ್ಯಕ್ಷ ಆನಂದ್ ಸಿ.ಕುಂದರ್ ಸ್ವಾಗತಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News