ಉಡುಪಿ| ಗ್ರಾಪಂ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ
Update: 2024-11-12 16:15 GMT
ಉಡುಪಿ, ನ.12: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು, ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, ಕೆರ್ವಾಶೆ ಹಾಗೂ ಕಡ್ತಲ ಗ್ರಾಪಂಗಳ ಉಪಚುನಾವಣೆಗೆ ಸಂಬಂಧಿ ಸಿದಂತೆ ನ.23ರಂದು ಮತದಾನ ನಡೆಯಲಿದ್ದು, ಮತದಾನದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರಿಗೆ ಮತ ಹಾಕಲು ಅನುಕೂಲ ವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚುನಾವಣೆ ನಡೆಯುವ ದಿನದಂದು ಮೇಲ್ಕಂಡ ಗ್ರಾಪಂಗಳ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.