ಕುರ್ಕಾಲು: ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

Update: 2024-11-12 16:23 GMT

ಉಡುಪಿ, ನ.12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಗ್ರಾಮ ಪಂಚಾಯತ್ ಕುರ್ಕಾಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರವು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ಸೋಮವಾರ ಜರಗಿತು.

ಕುರ್ಕಾಲು ಗ್ರಾಪಂ ಅಧ್ಯಕ್ಷ ಪ್ರಶಾಂತ್ ಆನಂದ ಪೂಜಾರಿ ಕಾರ್ಯಾಗಾರ ಉದ್ಘಾಟಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಚರಣ್ ದ್ರಾವಿಡ್, ಅಪೌಷ್ಠಿಕತೆ, ಕುಷ್ಠರೋಗ, ಕ್ಷಯರೋಗ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಆಶ್ವಿನಿ, ರಕ್ತಹೀನತೆ, ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಬಗ್ಗೆ ಹಾಗೂ ಅಂಗನವಾಡಿ ಮೇಲ್ವಿಚಾರಕಿ ಫಿಲೋಮಿನಾ ರೆಬೆಲ್ಲೋ ಬಾಲ್ಯವಿವಾಹದ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನತಾಲಿಯಾ ಮಾರ್ಟಿಸ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು. ಹೇಮಂತ್ ಸ್ವಾಗತಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News